×
Ad

ಶಿರೂರು ದುರಂತದ ವೇಳೆ ಸೇವೆಗೈದ ಪತ್ರಕರ್ತರಿಗೆ ಸನ್ಮಾನ

Update: 2024-07-24 19:43 IST

ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತನ್ನ ಕಚೇರಿಯಲ್ಲಿ ಸನ್ಮಾನಿಸಿದರು.

ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿತ್ತು. ಪೋಸ್ಟ್‌ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವ ಶಂಕರ್ ನೆರವಾಗಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಮಾಹಿತಿ ಪಡೆದು ಕಚೇರಿಗೆ ಆಹ್ವಾನಿಸಿ ಪತ್ರಕರ್ತರನ್ನು ಸನ್ಮಾನಿಸಿದರು.

ಈ ಸಂದರ್ಭ ದ.ಕ. ಜಿಲ್ಲಾ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಅಧ್ಯಕ್ಷ ವಸಂತ್ ಎನ್. ಕೊಣಾಜೆ, ಗಣೇಶ್ ತಲಪಾಡಿ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News