ದ.ಕ.ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
Update: 2024-07-24 20:31 IST
ಮಂಗಳೂರು: ದ.ಕ.ಜಿಲ್ಲಾ ಸರಕಾರಿ ವಕೀಲರ ಹುದ್ದೆಗಾಗಿ ಅರ್ಹ ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯು ಜಿಲ್ಲಾಧಿಕಾರಿ ಕಚೆೇರಿಯ ಕಾನೂನು ಶಾಖೆಯಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸಲು ಆ.5 ಕೊನೆಯ ದಿನವಾಗಿದೆ.
ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 10 ವಷರ್ಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿ ರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವಿಧ ರೀತಿಯ ಕಿಷ್ಟಕರ ಮತ್ತು ಸಂಕೀರ್ಣ ವಿಚಾರ ಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು.
ವಿಶೇಷ ಅರ್ಹತೆಗಳಿದ್ದರೆ ಈ ಬಗ್ಗೆ ದಾಖಲೆ ಲಗೀಕರಿಸಬೇಕು. ಅರ್ಜಿಗಳು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಶಿಫಾರಸ್ಸುಗೊಂಡ ನಂತರವೇ ಸರಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿಯ ಕಚೇರಿ ಪ್ರಕಟನೆ ತಿಳಿಸಿದೆ.