×
Ad

ಮುಡಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್

Update: 2024-07-24 21:38 IST

ಸಾಂದರ್ಭಿಕ ಚಿತ್ರ

ಮಂಗಳೂರು: ನಗರದ ಉರ್ವಸ್ಟೋರ್ ಜಂಕ್ಷನ್‌ನಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಬುಧವಾರ ಅಪರಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಇದರಿಂದ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಯಿತು.

ದಟ್ಟ ಹೊಗೆ ಆವರಿಸಿಕೊಳ್ಳುತ್ತಿದ್ದಂತೆ ಕಚೇರಿಯಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿ ಅಪಾಯದಿಂದ ಪಾರಾದರು. ಮಾಹಿತಿ ತಿಳಿದೊಡನೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ವಿದ್ಯುತ್ ಜಂಕ್ಷನ್ ಬೋರ್ಡ್ ಬಳಿ ವಯರಿಂಗ್ ಭಾಗ ಸುಟ್ಟು ಹೋಗಿದೆ. ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News