×
Ad

ಮುಸ್ಲಿಂ ಸಮಾಜ ಬಂಟ್ವಾಳ ವತಿಯಿಂದ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Update: 2024-07-28 21:44 IST

ಬಂಟ್ವಾಳ: ಮುಸ್ಲಿಂ ಸಮಾಜ ಬಂಟ್ವಾಳ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬಿ.ಸಿ.ರೋಡ್ ಕೈಕಂಬದ ಸಂಘದ ಕಚೇರಿಯಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಏಸ್ ಐಎಎಸ್ ಅಕಾಡೆಮಿ ನಿರ್ದೇಶಕ ನಝೀರ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದರೆ ಸಾಲದು ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಆಡಳಿತ ವಿಭಾಗ ದಲ್ಲಿಯೂ ಸೇವೆ ಸಲ್ಲಿಸಲು ಮುಂದೆ ಬರಬೇಕು ಎಂದು ಕರೆ ನೀಡಿದರು.

ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಮುಬೀನಾ ಬಾನು, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್ ಮೊಹಮ್ಮದ್, ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಮೂನಿಷ್ ಅಲಿ ಶುಭ ಹಾರೈಸಿದರು.

ಮುಸ್ಲಿಂ ಸಮಾಜ ಬಂಟ್ವಾಳ ಅಧ್ಯಕ್ಷ ಅಬೂಬಕ್ಕರ್ ಕೆ.ಎಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ಧರು. ಇಕ್ಬಾಲ್ ಅಕ್ಕರಂಗಡಿ, ಪಿ.ಎ ರಹೀಂ, ಶಾಹುಲ್ ಹಮೀದ್, ಮುಹಮ್ಮದ್ ಶಾಲಿ, ಹಸನ್ ರಿದಾನ್, ಇಕ್ಬಾಲ್ ಪರ್ಲಿಯಾ, ಇಬ್ರಾಹಿಂ ಕೈಲಾರ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ ಪ್ರಸ್ತಾವನೆಗೈದರು. ಮುಹಮ್ಮದ್ ಬಂಟ್ವಾಳ ಸ್ವಾಗತಿಸಿ, ಇಕ್ಬಾಲ್ ಐಎಮ್ಆರ್ ವಂದಿಸಿದರು. ಝೈನುಲ್ ಅಕ್ಬರ್ ಕಡೇಶ್ವಾಲ್ಯ ಕಾರ್ಯಕ್ರಮ ನಿರೂಪಿಸಿದರು.












Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News