×
Ad

ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Update: 2024-08-07 19:44 IST

ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

*ಸ್ವಯಂ ಉದ್ಯೋಗ ಸಾಲ ಯೋಜನೆ: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಸೇರಿದ ಮಡಿವಾಳ ಮತ್ತು ಅದರ ಉಪಜಾತಿ ಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆಕೈಗೊಳ್ಳಲು ಗರಿಷ್ಠ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು, 1 ಲಕ್ಷ ರೂ.ವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ 20,000 ರೂ.ಗಳ ಸಹಾಯಧನ ಹಾಗೂ 1.01 ಲಕ್ಷ ರೂ.ನಿಂದ 2 ಲಕ್ಷ ರೂ.ವರೆಗೆ ಶೇ.15ರಷ್ಟು ಕನಿಷ್ಠ 20,000 ರೂ.ವರೆಗೆ ಗರಿಷ್ಠ 30,000 ರೂ.ಸಹಾಯಧನ ಉಳಿಕೆ ಮೊತ್ತ ಶೇ.4ರ ಬಡ್ಡಿದರದಲ್ಲಿ ಸಿಗಲಿದೆ.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 1.20 ಲಕ್ಷ ರೂ. ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷ ಪ್ರಾಯದೊಳಗಿರಬೇಕು.

*ಗಂಗಾ ಕಲ್ಯಾಣ ನೀರಾವರಿ ಯೋಜನೆ: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪ ಜಾತಿಗಳಿಗೆ ಸೇರಿದ ಜನಾಂಗದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗು ವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ 3.75 ಲಕ್ಷ ರೂ.ಗಳು. ಇದರಲ್ಲಿ ವಿದ್ಯುದ್ಧೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000 ರೂ.ಗಳನ್ನು ಮೆಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂ. ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

*ಅರಿವು-ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಡಿ ಸಿಇಟಿ ಮತ್ತು ನೀಟ್ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-2ಎ-ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ 28 ಕೋರ್ಸ್‌ ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು 3.50 ಲಕ್ಷ ರೂ.ಗಳ ಮಿತಿಯಲ್ಲಿರಬೇಕು.

*ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ: ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‌ಡಿ, ಇಂಜಿನಿಯರಿಂಗ್ ಟೆಕ್ನಾಲಜಿ, ಮ್ಯಾನೇಜ್ಮೆಂಟ್ ಕಾಮರ್ಸ್, ಸೈನ್ಸ್ ಟೆಕ್ನಾಲಜಿ, ಅಗ್ರಿಕಲ್ಚರ್ ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ ಸೋಶಿಯಲ್ ಸೈನ್ಸಸ್ ವ್ಯಾಸಂಗಕ್ಕೆ ಪ್ರವೇಶ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8.00ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS WorldRanking 500ರೊಳಗೆ ಬರುವ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು.

ವಾರ್ಷಿಕ ಗರಿಷ್ಠ 10 ಲಕ್ಷ ರೂ.ಹಾಗೂ ಪೂರ್ಣ ಕೋರ್ಸ್ ಅವಧಿಗೆ 20 ಲಕ್ಷ ರೂ.ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾ ಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋೀಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (ಣ್ಛ್ಛಛ್ಟಿ ಔಛಿಠಿಠಿಛ್ಟಿ) ವಿದ್ಯಾರ್ಥಿಯ ವೀಸಾ-ಪಾಸ್‌ಪೋರ್ಟ್, ಏರ್ ಟಿಕೆಟ್ ಪ್ರತಿ ಒದಗಿಸಬೇಕು.

*ಸ್ವಾವಲಂಬಿ ಸಾರಥಿ ಯೋಜನೆ: ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್‌ ಗಳಿಂದ ಪಡೆಯುವ ಸಾಲಕ್ಕೆ ಶೇ.50ರಷ್ಟು, ಗರಿಷ್ಟ 3 ಲಕ್ಷ ರೂ.ಗಳ ಸಹಾಯಧನ ಮಂಜೂರು ಮಾಡಲಾಗುವುದು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ., ಪಟ್ಟಣ ಪ್ರದೇಶದವರಿಗೆ 1,20,000 ರೂ. ಒಳಗಿರಬೇಕು, ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

*ಸ್ವಯಂ ಉದ್ಯೋಗ ಸಾಲ ಯೋಜನೆ: ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲುಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು/ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ 1 ಲಕ್ಷ ರೂ.ಗಳ ಸಹಾಯಧನ ಮಂಜೂರು ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಪಡೆಯಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಮತ್ತು ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ಪಾಸ್ ಪುಸ್ತಕದಲ್ಲಿಯೂ ಇದ್ದು ಹೆಸರು ಹೊಂದಾಣಿಕೆಯಾಗಬೇಕು.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ವನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ www.dbcdc.karnataka.gov.in ಮಾಹಿತಿಯನ್ನು ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832, 8050770004/8050770005. ದ.ಕ.ಜಿಲ್ಲಾ ಕಚೇರಿಯ ದೂ.ಸಂ: 0824- 2456544ನ್ನು ಸಂಪರ್ಕಿಸುವಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News