×
Ad

ಮಂಗಳೂರು: ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Update: 2024-09-24 21:09 IST

ಮಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಹಗರಣದಲ್ಲಿ ರಾಜ್ಯಪಾಲರ ತನಿಖೆ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಮಂಗಳವಾರ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ ಮಾತನಾಡಿದರು. ಪ್ರತಿಭಟನೆಯಲ್ಲಿ ಮೇಯರ್ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ, ಮಾಜಿ ಮೇಯರ್‌ಗಳಾದ ಸುಧೀರ್ ಶೆಟ್ಟಿ, ಪ್ರೇಮಾನಂದ ಶೆಟ್ಟಿ, ಮುಖಂಡರಾದ ರವೀಂದ್ರ ಶೆಟ್ಟಿ, ಯತೀಶ್ ಆರ್ವಾರ್, ಜಗದೀಶ್ ಶೇಣವ, ಶಕೀಲಾ ಕಾವ, ಪೂಜಾ ಪೈ, ದಿವಾಕರ್ ಪಾಂಡೇಶ್ವರ, ಡಾ. ಮಂಜುಳಾ ರಾವ್, ಮಹೇಶ್ ಜೋಗಿ, ಸಂದೇಶ್ ಶೆಟ್ಟಿ, ನಂದನ್ ಮಲ್ಯ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News