×
Ad

ಕ್ಯಾಂಪ್ಕೋ ನಿಯೋಗದಿಂದ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿಯ ಭೇಟಿ

Update: 2024-10-26 19:39 IST

ಮಂಗಳೂರು: ದ.ಕ.ಜಿಲ್ಲೆಯ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ನೇತೃತ್ವದ ನಿಯೋಗವು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಅವರನ್ನು ಚೆನೈಯಲ್ಲಿ ಶುಕ್ರವಾರ ಭೇಟಿ ಮಾಡಿತು.

ಈ ಸಂದರ್ಭ ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯ ಉಪಯೋಗ ಕ್ಯಾನ್ಸರ್‌ ಕಾರಕವೆಂದು ಪರಿಗಣಿಸಿರುವುದು ಅಡಿಕೆಯನ್ನೇ ಜೀವನಾಧಾರವಾಗಿ ನಂಬಿರುವ ರೈತರ ಮೇಲೆ ಬೀರಿರುವ ಪರಿಣಾಮದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.

ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ.ಸತ್ಯನಾರಯಣ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್ ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News