×
Ad

ಪ್ರದೀಪ ಕುಮಾರ ಕಲ್ಕೂರಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ

Update: 2024-10-26 22:12 IST

ಮಂಗಳೂರು: ’ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ - ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಜಿಲ್ಲೆಯ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ರಂಗದ ಸಾಧಕರು ಮತ್ತು ಯಕ್ಷಗಾನ ಕಲಾಪೋಷಕರಿಗಾಗಿ ನೀಡುವ ’ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ಕ್ಕೆ ಪ್ರದೀಪ ಕುಮಾರ್ ಕಲ್ಕೂರ ಲಭಿಸಿದೆ.

ಪ್ರದೀಪ್ ಕುಮಾರ್ ಕಲ್ಕೂರಾ ಅವರು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸಿದ ಹಲವು ಸೇವಾ ಕಾರ್ಯಗಳಿಗಾಗಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ನ.17ರಂದು ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News