ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಸವಾರರಿಗೆ ಗಾಯ
Update: 2024-10-28 23:36 IST
ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಸವಾರರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಗೋಳಿತ್ತೊಟ್ಟುನಲ್ಲಿ ಅ.28ರ ರಾತ್ರಿ ನಡೆದಿದೆ.
ಅಂಬ್ರಾಜೆ ನಿವಾಸಿ ಚಂದ್ರಶೇಖರ ಹಾಗೂ ಅವರ ಮಗ ತೇಜಸ್ ಸಂಚಾರ ಮಾಡುತ್ತಿದ್ದ ದ್ವಿಚಕ್ರ ವಾಹನ ಹಾಗೂ ಪಟೇರಿ ನಿವಾಸಿ ಪ್ರಕಾಶ್ ಕೆ.ಎನ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪ್ರಕಾಶ್ ಕೆ.ಎನ್. ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಚಂದ್ರ ಶೇಖರ ಹಾಗೂ ಅವರ ಮಗ ತೇಜಸ್ ಸಣ್ಣ ಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾ ಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಹಾಗೂ ಪುತ್ತೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.