×
Ad

ನರಿಂಗಾನ: ರಾಷ್ಟ್ರೀಯ ಆಯುರ್ವೇದ ದಿನಾಚರಣೆ

Update: 2024-10-30 22:24 IST

ಕೊಣಾಜೆ: 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಯೆನೆಪೋಯ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ನರಿಂಗಾನ ಇದರ ವತಿಯಿಂದ ಸಾಂಪ್ರದಾಯಿಕ ಮತ್ತು ಪಾರಂಪರಿಕ ಆಯುರ್ವೇದ ಚಿಕಿತ್ಸೆಯ ಮೂಲಕ ಸೇವೆ ಸಲ್ಲಿಸುತ್ತಿರುವ ವೈದ್ಯರಾದ ನಿರಂಜನ್ ಆಚಾರ್ಯ ಅವರಿಗೆ 2024 ನೇ ಸಾಲಿನ ಯೆನ್ ಆಯು ವೈದ್ಯ ರತ್ನ ಪ್ರಶಸ್ತಿ ಯನ್ನು ನರಿಂಗಾನದ ಯೆನೆಪೋಯ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಬುಧವಾರ ನೀಡಿ‌ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಆಶಾಜ್ಯೋತಿ ರೈ, ಯೆನೆಪೋಯ ವಿವಿ ಉಪಕುಲಪತಿ ಡಾ.ಶ್ರೀಪತಿ ರಾವ್, ಪ್ರಾಂಶುಪಾಲರಾದ ಡಾ.ಗುರುರಾಜ್ ಎಚ್ ಮೊದಲಾದವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News