×
Ad

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ: ದಂಪತಿ ಬಂಧನ

Update: 2024-10-30 22:27 IST

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮ ದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ನಡೆದಿದೆ.

ಬಂಧಿತರನ್ನು ನಝೀರ್ ಹಾಗೂ ಆತನ ಪತ್ನಿ ಅಸ್ಮ ಎಂದು ಗುರುತಿಸಲಾಗಿದೆ. ಅವರು ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳಿಂದ 6.800 ಕೆಜಿ ಗಾಂಜಾ ಹಾಗೂ ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾವನ್ನು ದಂಪತಿ ಮನೆ ಮತ್ತು ಕಾರಿನಲ್ಲಿ ಶೇಖರಿಸಿ ಇಟ್ಟು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಹೊರಗಿನಿಂದ ಬಂದು ಬಾಡಿಗೆಗೆ ಕುಳಿತು ಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 10 ಲಕ್ಷ ರೂ.ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News