×
Ad

ಮೇಲ್ತೆನೆಯ ಅಧ್ಯಕ್ಷರಾಗಿ ಇಬ್ರಾಹೀಂ ನಡುಪದವು ಆಯ್ಕೆ

Update: 2024-12-29 18:56 IST

ದೇರಳಕಟ್ಟೆ, ಡಿ.29: ಮೇಲ್ತೆನೆ (ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ) ದೇರಳಕಟ್ಟೆ ಇದರ ವಾರ್ಷಿಕ ಸಭೆಯು ಶನಿವಾರ ನಾಟೆಕಲ್-ವಿಜಯನಗರದಲ್ಲಿರುವ ಇಲೈಟ್ ಟ್ಯೂಶನ್ ಸೆಂಟರ್‌ನಲ್ಲಿ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್ ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು.

ಸಭೆಯಲ್ಲಿ 2025ನೆ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಆಲಿಕುಂಞಿ ಪಾರೆ, ಅಧ್ಯಕ್ಷರಾಗಿ ವಿ. ಇಬ್ರಾಹೀಂ ನಡುಪದವು, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಮಲಾರ್, ಕೋಶಾಧಿಕಾರಿಯಾಗಿ ಮನ್ಸೂರ್ ಅಹ್ಮದ್ ಸಾಮಣಿಗೆ, ಉಪಾಧ್ಯಕ್ಷರಾಗಿ ಅಶ್ರಫ್ ದೇರಳಕಟ್ಟೆ ಡಿ.ಎ., ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್ ಎಸ್. ರಾಝ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇಸ್ಮಾಯಿಲ್ ಮಾಸ್ಟರ್, ಮುಹಮ್ಮದ್ ಬಾಷಾ ನಾಟೆಕಲ್, ಅಬ್ದುಲ್ ಬಶೀರ್ ಕಲ್ಕಟ್ಟ, ಬಶೀರ್ ಅಹ್ಮದ್ ಕಿನ್ಯ, ಅಶೀರುದ್ದೀನ್ ಸಾರ್ತಬೈಲ್, ರಿಯಾಝ್ ಮಂಗಳೂರ, ಆಸೀಫ್ ಬಬ್ಬುಕಟ್ಟೆ, ರಫೀಕ್ ಕಲ್ಕಟ್ಟ ಅವರನ್ನು ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News