ಮಂಗಳೂರು: ಅಂಬಿಗರ ಚೌಡಯ್ಯ ಜಯಂತಿ ಆಚರಣೆ
Update: 2025-01-21 22:21 IST
ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ, ದ.ಕ. ಮತ್ತು ಉಡುಪಿ ನಿಜಶರಣ ಅಂಬಿಗರ ಸೇವಾ ಸಂಘದ ಸಹಕಾರದೊಂದಿಗೆ ಅಂಬಿಗರ ಚೌಡಯ್ಯ ಜಯಂತಿಯು ಉರ್ವಸ್ಟೋರ್‌ನ ತುಳು ಭವನದಲ್ಲಿ ಮಂಗಳವಾರ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದರು. ಉಪನ್ಯಾಸಕ ಯೋಗೀಶ್ ಕೈರೋಡಿ ಉಪನ್ಯಾಸ ನೀಡಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್, ಜಿಕೆ ರಮೇಶ್ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಪ್ರದೀಪ್ ಡಿಎಂ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.