×
Ad

ಮಂಗಳೂರು| ರಾಷ್ಟ್ರೀಯ ಬೀದಿ ವ್ಯಾಪಾರಿಗಳ ದಿನಾಚರಣೆಯ ಅಂಗವಾಗಿ ಹಕ್ಕೊತ್ತಾಯ ಸಭೆ: ಸಂಘಟಕರ ವಿರುದ್ಧ ಪ್ರಕರಣ ದಾಖಲು

Update: 2025-01-22 20:33 IST

ಮಂಗಳೂರು: ರಾಷ್ಟ್ರೀಯ ಬೀದಿ ವ್ಯಾಪಾರಿಗಳ ದಿನಾಚರಣೆಯ ಅಂಗವಾಗಿ ನಗರದ ಪುರಭವನದ ಬಳಿ ಮಂಗಳವಾರ ಬೀದಿ ವ್ಯಾಪಾರಿಗಳ ಹಕ್ಕೊತ್ತಾಯ ಸಭೆಯನ್ನು ನಡೆಸಿದ ಸಂಘಟಕರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜ.21ರಂದು ಬೆಳಗ್ಗೆ 10ಕ್ಕೆ ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಕ್ಕೊತ್ತಾಯ ಸಭೆ ನಡೆಸುವುದಾಗಿ ಮಾಹಿತಿ ಇತ್ತು. ಈ ವೇಳೆ ಬೀದಿ ಬದಿ ಶ್ರೇಯೋಭಿವೃದ್ದಿ ಸಂಘದ ವತಿಯಿಂದ ಪುರಭವನದಲ್ಲಿ ಕಾರ್ಯ ಕ್ರಮ ಆಯೋಜನೆಯಾಗಿತ್ತು. ಹಾಗಾಗಿ ಹಕ್ಕೊತ್ತಾಯ ಸಭೆಯ ಸ್ಥಳ ಹಾಗೂ ಸಮಯವನ್ನು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಬದಲಾವಣೆ ಮಾಡುವಂತೆ ಇಮ್ತಿಯಾಝ್‌ಗೆ ನೋಟಿಸ್ ನೀಡಿ ತಿಳಿಸಲಾಗಿತ್ತು. ಆದರೂ ನೋಟಿಸ್‌ನಲ್ಲಿ ತಿಳಿಸಿದ ಅಂಶಗಳನ್ನು ಉಲ್ಲಂಘಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಹಕ್ಕೊತ್ತಾಯ ಸಭೆ ನಡೆಸಲಾಗಿದೆ. ಅಲ್ಲದೆ ಅಕ್ರಮಕೂಟ ಕಟ್ಟಿಕೊಂಡು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡುವ ಉದ್ದೇಶದಿಂದ ಪುರಭವನದ ಬಳಿಯ ಕಾಲುದಾರಿಯಲ್ಲಿ ಗುಂಪು ಸೇರಿ ಕಮ್ಯುನಿಸ್ಟ್ ಪಕ್ಷದ ಬಾವುಟಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಪಾದಚಾರಿಗಳಿಗೆ ತೊಂದರೆಯುಂಟು ಮಾಡಿರುತ್ತಾರೆ ಎಂದು ಆರೋಪಿಸಿ ಪೊಲೀಸರು ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News