ರಸ್ತೆ ಅಪಘಾತ: ಗಾಯಾಳು ಯಕ್ಷಗಾನ ಕಲಾವಿದ ಮೃತ್ಯು
Update: 2025-01-25 22:44 IST
ಮಂಗಳೂರು: ಗಾಯಗೊಂಡಿದ್ದ ಕಟೀಲು ಯಕ್ಷಗಾನ ಮೇಳದ ಕಲಾವಿದ ಆನಂದ ಕಟೀಲು (47) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಿನ್ನಿಗೋಳಿಯಲ್ಲಿ ಜ.1ರಂದು ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ರಿಕ್ಷಾ ಪಲ್ಟಿಯಾಗಿದ್ದು, ರಿಕ್ಷಾ ಚಲಾಯಿಸುತ್ತಿದ್ದ ಆನಂದ ಅವರು ತೀವ್ರ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಅವರನ್ನು ಅಲ್ಲಿಂದ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆಸ್ಪತ್ರೆಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.