ಬೆಳ್ತಂಗಡಿ: ಕಾರುಗಳ ನಡುವೆ ಅಪಘಾತ; ಮಗು ಸೇರಿ ನಾಲ್ವರಿಗೆ ಗಾಯ
Update: 2025-02-02 18:53 IST
ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸಂಜೆ ಅಳದಂಗಡಿ ಪಿಲ್ಯ ಸಮೀಪ ನಡೆದಿದೆ.
ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.
ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯ ಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡವರನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ತಿಳಿದುಬಂದಿಲ್ಲ.