×
Ad

ಅಶ್ಲೀಲ ವೀಡಿಯೋ ಕಳುಹಿಸಿ ಬೆದರಿಕೆ ಆರೋಪ; ಪ್ರಕರಣ ದಾಖಲು

Update: 2025-02-06 20:44 IST

ಮಂಗಳೂರು: ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್ ಕಳುಹಿಸಿ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತನ್ನ ಸ್ನ್ಯಾಪ್‌ಚಾಟ್ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್‌ಚಾಟ್ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಕ್ರೀನ್ ರೆಕಾರ್ಡ್ ಮಾಡಿರುವ ವೀಡಿಯೋ ಫೈಲ್‌ನ್ನು ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ಗೆ (ಎನ್‌ಸಿಸಿಆರ್‌ಪಿ) ದೂರು ನೀಡಿದ್ದಾಳೆ. ಅದರಂತೆ ಪೊಲೀಸರು ಮಂಗಳೂರಿನ ಓರ್ವ ಶಂಕಿತ ಸ್ನ್ಯಾಪ್‌ಚಾಟ್ ಖಾತೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News