×
Ad

ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಎಸ್‌ಸಿಆರ್) ರಾಷ್ಟ್ರೀಯ ಅಧ್ಯಕ್ಷರಾಗಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಆಯ್ಕೆ

Update: 2025-02-08 17:18 IST

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿ ಇದರ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ದಿಲ್ಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ (ಎಸ್‌ಸಿಆರ್) ಶುಕ್ರವಾರ ಆಯ್ಕೆಗೊಂಡಿದ್ದಾರೆ.

ಸಹಕಾರಿ ಕ್ಷೇತ್ರವನ್ನೇ ತನ್ನ ಉಸಿರಾಗಿಸಿಕೊಂಡು ಸಮಾಜಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ದೃಢ ಸಂಕಲ್ಪದೊಂದಿಗೆ ಮಹತ್ತರವಾದ ಕಾರ್ಯ ನಿರ್ವ ಹಣೆ ಮೂಲಕ ರಾಷ್ಟ್ರ ಮಟ್ಟದಲ್ಲಿ ಪ್ರಭಾವಶಾಲಿ ನಾಯಕತ್ವದಿಂದ ಗುರುತಿಸಿಕೊಂಡಿದ್ದು, ಅವರ ಈ ಸಮಾಜ ಸೇವೆಯ ಕಾರ್ಯವೈಖರಿಯನ್ನು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಆಯ್ಕೆ ಸಮಿತಿ ಹಾಗೂ ಗೌರವಾನ್ವಿತ ಸಲಹೆ ಗಾರರ ಸಮಿತಿ ಗುರುತಿಸಿ, ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ( ಎಸ್‌ಸಿಆರ್ - ಸಾಮಾಜಿಕ ಕಾರಣದ ಜವಾಬ್ದಾರಿ ವಲಯ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಿಂದ ನೋಂದಾಯಿಸಲ್ಪಟ್ಟ ಮತ್ತು ಗುರುತಿಸಲ್ಪಟ್ಟಿರುವ ನ್ಯಾಷ ನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಗೌರವಾನ್ವಿತ ಸಲಹೆಗಾರರಾದ ನಿವೃತ್ತ ನ್ಯಾಯಮೂರ್ತಿ ನಿಟ್ಟೆ ಸಂತೋಷ್ ಹೆಗ್ಡೆ , ‘ನಾಡೋಜ ’ ನ್ಯಾಯಮೂರ್ತಿ ಡಾ. ಎಸ್. ಆರ್. ನಾಯಕ್, ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ , ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ. ಎನ್. ಮಂಜುನಾಥ್, ನಿವೃತ್ತ ಐಪಿಎಸ್ ಅಧಿಕಾರಿ ಕೆ. ಸಿ. ರಾಮಮೂರ್ತಿ ಹಾಗೂ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಶ್ರವಣ ಲಕ್ಷ್ಮಣ್ ಇವರ ನ್ನೊಳಗೊಂಡ ಸಲಹಾ ಸಮಿತಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ( ಎಸ್ ಸಿ ಆರ್ - ಸಾಮಾಜಿಕ ಕಾರಣದ ಜವಾಬ್ದಾರಿ ವಲಯ) ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿತ್ತು.

ಬೆಂಗಳೂರಿನಲ್ಲಿ ಪ್ರಮಾಣ ಪತ್ರ ನೀಡಿ ಗೌರವ : ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಶುಕ್ರವಾರ ನ್ಯಾಷನಲ್ ಪ್ರೆಸ್ ಕೌನ್ಸಿಲ್‌ನ ಗೌರವ ಸಲಹೆಗಾರರಾದ ನಿವೃತ್ತ ನ್ಯಾಯಮೂರ್ತಿ ನಿಟ್ಟೆ ಸಂತೋಷ್ ಹೆಗ್ಡೆ, ಆರ್. ಜಿ. ಯು. ಹೆಚ್. ಎಸ್. ನಿವೃತ್ತ ಉಪಕುಲಪತಿ ಡಾ. ಚಂದ್ರಶೇಖರ್ ಶೆಟ್ಟಿ, ಎನ್ ಪಿಸಿಐ ಅಧ್ಯಕ್ಷ ಶ್ರವಣ ಲಕ್ಷ್ಮಣ್ ಅವರು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News