ಬ್ಲಾಕ್ ಕಾಂಗ್ರೆಸ್ ವತಿಯಿಂದ ಯೂತ್ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಗೌರವಾರ್ಪಣೆ
ಉಳ್ಳಾಲ: ಐದು ವರ್ಷಗಳಲ್ಲಿ ಆಗಬೇಕಾದ ಕಾಮಗಾರಿಗಳನ್ನು ಶಾಸಕ ಯುಟಿ ಖಾದರ್ ಕೇವಲ ಎರಡು ವರ್ಷಗಳಲ್ಲಿ ಮಾಡಿ ಮುಗಿಸಿದ್ದಾರೆ. ನಮ್ಮ ಕೆಲಸ ಇದೇ ರೀತಿ ಒಗ್ಗಟ್ಟಿನಿಂದ ಆಗಬೇಕು, ಯೂತ್ ಕಾಂಗ್ರೆಸ್ ನೂತನ ಪದಾಧಿಕಾರಿಗಳು ಜತೆಯಾಗಿ ಸೇವೆ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಅಭಿಪ್ರಾಯ ಪಟ್ಟರು.
ಅವರು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕಚೇರಿಯಲ್ಲಿ ನಡೆದ ಯೂತ್ ಕಾಂಗ್ರೆಸ್ ಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿ, ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪಕ್ಷದ ಸಂಘಟನೆ ಮಾಡಬೇಕು. ಬಿಕೆ ಹರಿಪ್ರಸಾದ್ ಸಹಿತ ಬಹಳಷ್ಟು ಮಂದಿ ಯೂತ್ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದವರು.ಇದೇ ರೀತಿ ನೂತನ ಪದಾಧಿಕಾರಿಗಳು ಪಕ್ಷಕ್ಕಾಗಿ ದುಡಿಯಬೇಕು ಎಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ, ತಾ.ಪಂ.ಮಾಜಿ ಸದಸ್ಯ ಮುಸ್ತಫಾ ಹರೇಕಳ,ವಿಶ್ವಾಸ್ ದಾಸ್, ಗ್ಯಾರಂಟಿ ಯೋಜನೆ ಸಮಿತಿಯ ತಾಲೂಕು ಅಧ್ಯಕ್ಷ ರಫೀಕ್ ಹರೇಕಳ ,ತಾ.ಪಂ.ಮಾಜಿ ಸದಸ್ಯ ಸುರೇಖ ಚಂದ್ರ ಹಾಸ್ , ನರಿಂಗಾನ ಗ್ರಾ.ಪಂ.ಅಧ್ಯಕ್ಷ ನವಾಝ್ ನರಿಂಗಾನ,ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಂ ಮಾತನಾಡಿದರು.
ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಗೆ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು.
ಸಭೆಯಲ್ಲಿ ಸೋಮೇಶ್ವರ ಪುರಸಭೆ ಸದಸ್ಯರಾದ ಪುರುಷೋತ್ತಮ ಪಿಲಾರ್,ದೀಪಕ್ ಪಿಲಾರ್, ನಾಮ ನಿರ್ದೇಶಿತ ಸದಸ್ಯ ಶ್ರೀಧರ್ ಆಳ್ವ,ಆಪ್ತ ಕಾರ್ಯದರ್ಶಿ ಮನ್ಸೂರ್ ಮಂಚಿಲ,ಕಾಂಗ್ರೆಸ್ ಮುಖಂಡ ನಾಸೀರ್ ಅಹ್ಮದ್ ಸಾಮಣಿಗೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಯೂತ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸಿ.ಎಂ.ರವೂಫ್, ನಗರ ಸಭೆ ಸದಸ್ಯರಾದ ಇಸ್ಮಾಯಿಲ್, ಬಾಜಿಲ್ ಡಿಸೋಜ, ಪಾವೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಪಿರೋಝ್, ಸಮಾಜ ಸೇವಕ ನವನೀತ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.