ಗುರುವಾಯನಕೆರೆ| ಡಿವೈಡರ್‌ಗೆ ಬೈಕ್ ಢಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು
Update: 2025-02-12 20:35 IST
ಬೆಳ್ತಂಗಡಿ: ಇಲ್ಲಿಯ ಗುರುವಾಯನಕೆರೆ- ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.12ರಂದು ರಾತ್ರಿ ಸಂಭವಿಸಿದೆ.
ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30) ಮೃತರು ಎಂದು ಗುರುತಿಸಲಾಗಿದೆ.
ಗುರುವಾಯನಕೆರೆಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.