ಮುಹಮ್ಮದ್ ಮಸೂದ್ ಮನೆಗೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೇಟಿ
Update: 2025-02-12 21:50 IST
ಮಂಗಳೂರು, ಫೆ.12: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಬ್ರಾಹಿಂ ನವಾಝ್ ಅವರು ವಿಧಾನ ಪರಿಷತ್ ಮಾಜಿ ಸದಸ್ಯ, ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ, ದ.ಕ.ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಸಮಿತಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್‌ರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಕಾರ್ಪೊರೇಟರ್ ಶಂಸುದ್ದೀನ್ ಕುದ್ರೋಳಿ, ಅನ್ಸಾರುದ್ದೀನ್ ಸಾಲ್ಮರ ಉಪಸ್ಥಿತರಿದ್ದರು.