×
Ad

ಚಾರ್ಮಾಡಿ: ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Update: 2025-02-13 22:11 IST

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆಯಾಗಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದು ಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿದೆ. ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಸಿ ಕಾಡಾನೆಗೆ ಚಿಕಿತ್ಸೆ ನೀಡಲಾಗಿದ್ದು ಸದ್ಯ ಆನೆ ಅದೇ ಸ್ಥಳದಲ್ಲಿದೆ.

ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News