ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಲಕ್ಕಿಸ್ಟಾರ್ ನೇಮಕ
Update: 2025-02-18 13:45 IST
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎ.ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರನ್ನು ನೇಮಿಸಲಾಗಿದೆ.
ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರಾಧ್ಯಕ್ಷ, ಸಂಸದ ಇಮ್ರಾನ್ ಪ್ರತಾಪ್ ಗಾರ್ ಅವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕರ್ನಾಟಕ ರಾಜ್ಯಾಧ್ಯಕ್ಷ, ಶಾಸಕ ಅಬ್ದುಲ್ ಜಬ್ಬಾರ್ ಈ ಬಗ್ಗೆ ಸೋಮವಾರ ನೇಮಕಾತಿ ಪತ್ರ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಘಟಕದ ರಾಜ್ಯ ಉಪಾಧ್ಯಕ್ಷ ಸಿರಾಜ್ ದಾವಣಗೆರೆ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.