ಬೇಡಿಕೆಗಳ ಈಡೇರಿಕೆಗೆ ಒತ್ತಾಯ| ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯಿಂದ ಸಚಿವ ಸತೀಶ್ ಜಾರಕಿಹೊಳಿಗೆ ಮನವಿ
ಬಜ್ಪೆ: ಬಜ್ಪೆ ಸಮಗ್ರ ಅಭಿವೃದ್ಧಿಯ ಭಾಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿರುವ ಅಧಿಕಾರಿಗಳನ್ನು ತಕ್ಷಣ ವರ್ಗಾಯಿಸಿ ಜನಪರ ಅಧಿಕಾರಿಗಳನ್ನು ನೇಮಿಸುವಂತೆ ಆಗ್ರಹಿಸಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಆಗ್ರಹಿಸಿತು.
ಬಜ್ಪೆ ಚತುಷ್ಪಥ ರಸ್ತೆಯ ಉಳಿದ ಕಾಮಗಾರಿ ಪೂರ್ಣಗೊಳಿಸಬೇಕು, ಬಜ್ಪೆ ಈದ್ಗಾ ಮಸೀದಿಯ ದಫನ ಭೂಮಿ ಬಳಿ ಮುಖ್ಯ ಹೆದ್ದಾರಿಗೆ ಶಾಶ್ವತ ತಡೆಗೋಡೆ ನಿರ್ಮಿಸಬೇಕು, ಪಿಡಬ್ಲ್ಯೂಡಿ ಕಾಮಗಾರಿಯಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಗೆ ಸಹಾಯ ಮಾಡುವ ಅಧಿಕಾರಿಯನ್ನು ಕೂಡಲೇ ವರ್ಗಾಹಿಸಬೇಕು ಎಂದು ಸಮಿತಿಯು ಮನವಿಯಲ್ಲಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಸಂಚಾಲಕ ಸಿರಾಜ್ ಬಜ್ಪೆ, ಮಹಿಳಾ ಮುಖಂಡರಾದ ವಿಜಯ ಸುವರ್ಣ, ಮುಲ್ಕಿ-ಮೂಡುಬಿದಿರೆ ಐಟಿ ಸೆಲ್ ಅಧ್ಯಕ್ಷರಾದ ನಿಸಾರ್ ಕರಾವಳಿ, ಕುಡುಬಿ ಸಮಾಜದ ಮುಖಂಡರಾದ ಶೇಖರ್ ಗೌಡ, ವೇದಿಕೆಯ ಹಿರಿಯರಾದ ಮೋನು ಹಾಜಿ, ಅನ್ವರ ರಝಾಕ್, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಸಂತೋಷ್ ಮೊದಲಾದವರು ಇದ್ದರು.