ಸಂವಿಧಾನ ಜಾಗೃತಿ ಸಮಾವೇಶ, ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ಮತ್ತು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಸಮಾವೇಶ ಉರ್ವಸ್ಟೋರ್‌ನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆಯಿತು.
ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಕರ್ನಾಟಕ ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್.ಧರ್ಮಸೇನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೂತನ ಅಧ್ಯಕ್ಷ ದಿನೇಶ್ ಮೂಳೂರು ಅವರಿಗೆ ನಿಕಟಪೂರ್ವ ಅಧ್ಯಕ್ಷ ಶೇಖರ ಕುಕ್ಕೇಡಿ ಅಧಿಕಾರ ಹಸ್ತಾಂತರಿಸಿದರು.
ಎಐಸಿಸಿ ಸಂಯೋಜಕ ಎಫ್ ಎಚ್ ಜತ್ತಪ್ಪನ್ನವರ್, ರಾಜ್ಯ ಸಂಚಾಲಕ ಕಾಳಯ್ಯ, ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ , ಗೇರು ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ, ಮಾಜಿ ಉಪ ಮೇಯರ್ ಅಪ್ಪಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾ ರಕ್ಷಿತ್ ಶಿವರಾಂ ಮತ್ತು ಎಂ.ಎಸ್.ಮುಹಮ್ಮದ್, ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ಜಿ ಮುಖ್ಯ ಅತಿಥಿಗಳಾಗಿದ್ದರು. ಪಕ್ಷದ ಧುರೀಣರಾದ ಶಾಲೆಟ್ ಪಿಂಟೊ, ಇಬ್ರಾಹೀಂ ನವಾಝ್, ಜೋಕೊಂ ಡಿ ಸೋಜ, ಶಾಹುಲ್ ಹಮೀದ್ ಕೆಕೆ, ವಿಶ್ವಾಸ್ ಕುಮಾರ್ ದಾಸ್ , ನಾರಾಯಣ್ ನಾಯ್ಕ್, ಮನೋರಾಜ್ ರಾಜೀವ್, ಡಾ.ಶೇಖರ ಪೂಜಾರಿ, ಸುದರ್ಶನ್ ಜೈನ್, ಬಿ.ಎಂ.ಅಬ್ಬಾಸ್ ಅಲಿ, ಜಿಲ್ಲಾ ಪರಿಶಿಷ್ಟ ಘಟಕದ ಪ್ರಧಾನ ಕಾರ್ಯದರ್ಶಿ ಗಣೇಶ್ ಪ್ರಸಾದ್, ಕಿರಣ್ ಕುಮಾರ್ ಸ್ವಾಗತಿಸಿ ದರು. ಪ್ರೇಮನಾಥ್ ವಂದಿಸಿದರು. ರೋಹಿತ್ ಉಳ್ಳಾಲ ಮತ್ತು ಕಿರಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.