ವಖ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್‌ಮೆಂಟ್‌ನಿಂದ ಪ್ರತಿಭಟನೆ
Update: 2025-02-20 20:23 IST
ಮಂಗಳೂರು, ಫೆ.20: ಕೇಂದ್ರ ಸರಕಾರದ ಸಂವಿಧಾನ ವಿರೋಧಿ ವಖ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್‌ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಫೆ.18ರಂದು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ಮಂಗಳೂರು ನಗರ ಜಿಲ್ಲಾಧ್ಯಕ್ಷೆ ನಿಶಾ ವಾಮಂಜೂರು, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯೆ ಮಿಸ್ರಿಯಾ ಕಣ್ಣೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಜಿಲ್ಲಾ ಕಾರ್ಯದರ್ಶಿ ಅಝ್ವೀನಾ ಅಕ್ರಮ್, ಜಿಲ್ಲಾ ಸಮಿತಿ ಸದಸ್ಯೆ ಹಾಝರ ಮಲಾರ್ ಹಾಗೂ ಕ್ಷೇತ್ರ, ಬ್ಲಾಕ್, ವಾರ್ಡ್ ಮತ್ತು ಬ್ರಾಂಚ್ ಸಮಿತಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು.