×
Ad

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ಆಗ್ರಹ

Update: 2025-02-21 20:17 IST

ಮಂಗಳೂರು: ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾ ಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಆಗ್ರಹಿಸಿದ್ದಾರೆ.

ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಲ್ಲ ಎಂದಿದ್ದಾರೆ.

ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾ ಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ. ಹಾಗಾಗಿ ಈ ಸುತ್ತೋಲೆಯಿಂದ ಭೂತಾರಾ ಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News