ಆರ್‌ಟಿಐ ಕಾರ್ಯಕರ್ತರ ಮೇಲೆ ವಾಮಾಚಾರ ಪ್ರಕರಣ: ಇಬ್ಬರ ವಶ
ಮಂಗಳೂರು, ಫೆ.22: ಆರ್‌ಟಿಐ ಕಾರ್ಯಕರ್ತ ಹಾಗೂ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸಹಿತ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್‌ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಈ ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ ಮತ್ತು ಸುಮಾ ಆಚಾರ್ಯ ಹೆಸರಿನ ಚೀಟಿ ಕಾಳಿಕಾಂಬ ದೇವಿ ಕೊರಳಿಗೆ ಹಾಕಲಾಗಿತ್ತು. ಬಲಿ ನೀಡಿದ್ದ ಕುರಿಗಳ ರಕ್ತವನ್ನು ಸ್ನೇಹಮಯಿ, ಗಂಗರಾಜು ಫೋಟೋಗೆ ಅರ್ಪಣೆ ಮಾಡಲಾಗಿತ್ತು. ವಾಮಾಚಾರದ ದೃಶ್ಯ ಶ್ರೀರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್‌ನಲ್ಲಿ ಪತ್ತೆಯಾ ಗಿತ್ತು. ಹಾಗಾಗಿ ಪ್ರಸಾದ್ ಅತ್ತಾವರ್‌ನನ್ನು ಪೊಲೀಸರು ಬಂಧಿಸಿದ್ದರು.