ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಚಾರಣ ಸಂಕಿರಣ
ಮಂಗಳೂರು, ಫೆ.22: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕೊಲಾಜಿ, ವೈದ್ಯಕೀಯ ಆಂಕೊಲಾಜಿ ಮತ್ತು ವಿಕಿರಣ ಆಂಕೊಲಾಜಿ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ‘ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ನಿರ್ವಹಣೆಯ ಒಳನೋಟಗಳು ’ ನಿರಂತರ ವೈದ್ಯಕೀಯ ಶಿಕ್ಷಣ (ಸಿಎಂಇ ) ಕಾರ್ಯಕ್ರಮ ಶನಿವಾರ ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ದಶಮಾನೋತ್ಸವ ಸ್ಮಾರಕ ಕಟ್ಟಡದ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕೊಯೆಲ್ಹೊ ಮುಖ್ಯ ಅತಿಥಿಯಾಗಿ ಭಾಗವಹಿಸಿ ಫಾ. ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಅವರು, ಕ್ಯಾನ್ಸರ್ ರೋಗಿಗಳಿಗೆ ನೈತಿಕ ಬೆಂಬಲ ಮತ್ತು ಸಮಾಲೋಚನೆಯ ಮಹತ್ವವನ್ನು ತಿಳಿಸಿದರು.
ಅಮೃತ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ತಲೆ ಮತ್ತು ಕುತ್ತಿಗೆ ಶಸ್ತ್ರಚಿಕಿತ್ಸೆ ಮತ್ತು ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಕೃಷ್ಣಕುಮಾರ್ ಥಂಕಪ್ಪನ್, ಸಂಸ್ಥೆಯ ಆಡಳಿತಾಧಿಕಾರಿ ಫಾ. ಅಜಿತ್ ಬಿ ಮಿನೆಜೆಸ್, ಡೀನ್ ಡಾ. ಆಂಟನಿ ಸಿಲ್ವಾನ್ ಡಿಸೋಜ, ಸರ್ಜಿಕಲ್ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ರೋಹನ್ ಚಂದ್ರ ಆರ್. ಗಟ್ಟಿ, ವೈದ್ಯಕೀಯ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ದಿನೇಶ್ ಶೇಟ್, ಮತ್ತು ವಿಕಿರಣ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಸಂದೇಶ್ ರಾವ್ ಉಪಸ್ಥಿತರಿದ್ದರು.
ವೈದ್ಯಕೀಯ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಡಾ. ನಿಶಿತಾ ಶೆಟ್ಟಿ ಸಭೆಗೆ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಡಾ. ನಿಶಿತಾ ಶೆಟ್ಟಿ ವಂದಿಸಿದರು.