×
Ad

ಯುನಿವೆಫ್ ರಮಝಾನ್ ಸ್ವಾಗತ ಕಾರ್ಯಕ್ರಮ

Update: 2025-02-22 21:34 IST

ಮಂಗಳೂರು, ಫೆ.22: ಯುನಿವೆಫ್ ಕರ್ನಾಟಕ ಇದರ ವತಿಯಿಂದ ರಮಝಾನ್ ಸ್ವಾಗತ ಕಾರ್ಯಕ್ರಮವು ನಗರದ ಕಂಕನಾಡಿಯ ಜಮೀಯತುಲ್ ಫಲಾಹ್ ಹಾಲ್‌ನಲ್ಲಿ ಜರಗಿತು.

ಱರಮಝಾನ್-ದೇವಭಕ್ತಿ ಮತ್ತು ಆತ್ಮಶುದ್ಧಿಯ ಮಾಸ ಎಂಬ ವಿಷಯದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಪ್ರವಚನ ನೀಡಿದರು.

ವೇದಿಕೆಯಲ್ಲಿ ಮಂಗಳೂರು ಶಾಖೆಯ ಅಧ್ಯಕ್ಷ ಉಬೈದುಲ್ಲಾ ಬಂಟ್ವಾಳ್ ಉಪಸ್ಥಿತರಿದ್ದರು. ಸಿರಾಜ್ ಹಸನ್ ಕಿರಾಅತ್ ಪಠಿಸಿದರು. ಕಾರ್ಯದರ್ಶಿ ಯು.ಕೆ. ಖಾಲಿದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕಾಝ್ ಅರ್ಸಲನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News