×
Ad

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Update: 2025-02-22 21:50 IST

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ - ಮಹಾಕಾಳಿ ದೇವಾಲಯದ ಬಳಿಯಿರುವ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಫೆ.22ರಂದು ಬೆಳಗ್ಗೆ ಪತ್ತೆಯಾಗಿದೆ.

ಇಳಂತಿಲ ಗ್ರಾಮದ ಕಾಯರ್‍ಕೋಡಿ ನಿವಾಸಿ ಯಾಸೀರ್ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ನದಿಗೆ ಹಾರಿದನೇ? ಅಥವಾ ಆತ್ಮಹತ್ಯೆ ಮಾಡಿಕೊಂಡನೇ? ಅಥವಾ ಈತನ ಸಾವಿಗೆ ಬೇರಾವುದೇ ಕಾರಣವಿರಬಹುದೇ? ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News