×
Ad

ಮಂಗಳೂರು - ಕಬಕ ಪುತ್ತೂರು ರೈಲು ಸುಬ್ರಹ್ಮಣ್ಯ ರೋಡ್‌ಗೆ ವಿಸ್ತರಣೆ

Update: 2025-02-25 22:07 IST

ಸಾಂದರ್ಭಿಕ ಚಿತ್ರ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು ರೈಲನ್ನು ಸುಬ್ರಹ್ಮಣ್ಯ ರೋಡ್‌ಗೆ ವಿಸ್ತರಿಸಿ ಕೇಂದ್ರ ರೈಲ್ವೆ ಸಚಿವಾಲಯ ಆದೇಶಿಸಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ ಮಂಗಳೂರು ಸೆಂಟ್ರಲ್ ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು (56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಬೆಳಗ್ಗೆ 5.18 ಕ್ಕೆ ಕಬಕ ಪುತ್ತೂರು ಮತ್ತು 6.30 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪಲಿದೆ.

ಸುಬ್ರಹ್ಮಣ್ಯ ರೋಡ್- ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ (56626) ಬೆಳಗ್ಗೆ 7 ಗಂಟೆಗೆ ಸುಬ್ರಹ್ಮಣ್ಯ ರೋಡ್‌ನಿಂದ ಹೊರಟು 7.48 ಕ್ಕೆ ಕಬಕ ಪುತ್ತೂರು ಮತ್ತು ಬೆಳಗ್ಗೆ 9.30 ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.

ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ (56627) ಸಂಜೆ 5.45 ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ರಾತ್ರಿ 7.03 ಕ್ಕೆ ಕಬಕ ಪುತ್ತೂರು ಮತ್ತು 8.10 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪುವುದು. ಸುಬ್ರಹ್ಮಣ್ಯ ರೋಡ್- ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ (56628) ಋಆತ್ರಿ 8.40 ಕ್ಕೆ ಸುಬ್ರಹ್ಮಣ್ಯ ರೋಡ್‌ನಿಂದ ಹೊರಟು 9.30 ಕ್ಕೆ ಕಬಕ ಪುತ್ತೂರು ಮತ್ತು 11.10 ಕ್ಕೆ ಮಂಗಳೂರು ಸೆಂಟ್ರಲ್ ತಲುಪುವುದು. ಪರಿಷ್ಕೃತ ಆದೇಶವು ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News