×
Ad

ಪಕ್ಷಿಗಳಿಗೆ ನೀರಿಡುವ ಕಾರ್ಯ ಶ್ಲಾಘನೀಯ: ಪ್ರೊ. ಗಣಪತಿ ಗೌಡ

Update: 2025-03-06 19:38 IST

ಮಂಗಳೂರು, ಮಾ.6: ಪರಿಸರ ನಾಶ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಜಾಗತಿಕ ತಾಪಮಾನ ಏರಿಕೆಯಾಗಿದೆ. ಇದು ಪ್ರಾಣಿ ಪಕ್ಷಿಗಳ ಅಸ್ಥಿತ್ವದ ಮೇಲೆ ಪರಿಣಾಮ ಬೀರುತ್ತಿದೆ. ಸುಡುಬಿಸಿಲಿನ ಈ ಸಂದರ್ಭದಲ್ಲಿ ಪಕ್ಷಿಗಳಿಗೆ ನೀರಿಡುವ ಕಾರ್ಯ ಶ್ಲಾಘನೀಯ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಹೇಳಿದರು.

ನಗರದ ವಿಶ್ವದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ಪಕ್ಷಿಗಳಿಗೆ ನೀರಿಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೀರು ಎಲ್ಲರ ಅಗತ್ಯಗಳಲ್ಲಿ ಒಂದಾಗಿದೆ. ಮನುಷ್ಯನಾದರೆ ನೀರಿರುವ ಕಡೆ ಹುಡುಕಿಕೊಂಡು ಹೋಗಿ ಕುಡಿಯುತ್ತಾನೆ. ಆದರೆ ಪಕ್ಷಿಗಳ ಸ್ಥಿತಿ ಬಹಳ ಕಷ್ಟವಾಗುತ್ತಿರುವ ಈ ಹೊತ್ತಿನಲ್ಲಿ ಪಕ್ಷಿಗಳಿಗೆ ನೀರಿಡುವ ಪದ್ಧತಿ ಉತ್ತಮವಾದುದು. ಯುವ ರೆಡ್‌ಕ್ರಾಸ್ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಎಂದರು.

ಯುವ ರೆಡ್‌ಕ್ರಾಸ್‌ನ ಕಾರ್ಯಕ್ರಮ ಅಧಿಕಾರಿ ಡಾ.ಭಾರತಿ ಪಿಲಾರ್ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News