ಪ್ಲೆಕ್ಸ್ ಬ್ಯಾನರ್ ತೆರವುಗೊಳಿಸಲು ಮಹಾನಗರಪಾಲಿಕೆ ಸೂಚನೆ
Update: 2025-03-07 21:41 IST
ಮಂಗಳೂರು, ಮಾ.7: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ನಗರದ ರಸ್ತೆ ಬದಿ, ಸರ್ಕಲ್ ಮತ್ತು ಸಾರ್ವಜನಿಕರು ಓಡಾಡುವ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡು ಅನಧಿಕೃತವಾಗಿ ಅಳವಡಿಸಲಾ ಗುತ್ತಿರುವ ಪ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಯು ಸೂಚನೆ ನೀಡಿದೆ.
ಸಂಚಾರ ಸುರಕ್ಷತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ನಗರದ ಸೌಂದರ್ಯವನ್ನು ಕಾಪಾ ಡುವ ನಿಟ್ಟಿನಲ್ಲಿ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಆಳವಡಿಸಿರುವ ಪ್ಲೆಕ್ಸ್ ಬ್ಯಾನರ್‌ಗಳನ್ನು ಕೂಡಲೇ ತೆರವುಗೊಳಿಸಲಾಗುತ್ತಿದೆ. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.