ಕಣ್ಣೂರು: ಬದ್ರಿಯಾ ಮಸೀದಿ ವತಿಯಿಂದ ಪ್ರತಿಭಟನೆ
Update: 2025-03-07 22:04 IST
ಮಂಗಳೂರು, ಮಾ.7: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಅಡ್ಯಾರ್ ಕಣ್ಣೂರಿನ ಬದ್ರಿಯಾ ಜುಮಾ ಮಸೀದಿಯ ವತಿಯಿಂದ ಶುಕ್ರವಾರ ಜುಮಾ ನಮಾಝಿನ ಬಳಿಕ ಮಸೀದಿ ಮುಂದೆ ಪ್ರತಿಭಟನೆ ನಡೆಯಿತು.
ಮಸೀದಿಯ ಖತೀಬ್ ಅನ್ಸಾರ್ ಫೈಝಿ ಬುರ್ಹಾನಿ ದುಆಗೈದರು. ಮಸೀದಿಯ ಅಧ್ಯಕ್ಷ ಹಾಜಿ ಮೊಹಮ್ಮದ್ (ಅಶೋಕ್ ಬೀಡಿ ) ಮತ್ತು ಸದಸ್ಯರು ಹಾಗೂ ಜಮಾಅತರು ಭಾಗವಹಿಸಿದ್ದರು.