×
Ad

ಅನಧಿಕೃತ ಮರಳು ಗಣಿಗಾರಿಕೆ ತಡೆಕಟ್ಟಲು ಖನಿಜ ಸಂರಕ್ಷಣಾ ಪಡೆ : ಸಚಿವ ಮಲ್ಲಿಕಾರ್ಜುನ

Update: 2025-03-11 18:19 IST

ಸಚಿವ ಎಸ್ . ಎಸ್. ಮಲ್ಲಿಕಾರ್ಜುನ

ಮಂಗಳೂರು: ಅನಧಿಕೃಕ ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಡೆಕಟ್ಟಲು ಖನಿಜ ಸಂರಕ್ಷಣಾ ಪಡೆಯನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್ . ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ಪ್ರಶ್ನೆಗೆ ಗಣಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮರಳು ಅಭಾವವಿದೆ. ಇದೇ ವೇಳೆ ಸಿಆರ್‌ಝೆಡ್ ಪ್ರದೇಶದಲ್ಲಿ ಯಥೇಚ್ಛವಾಗಿ ಅಕ್ರಮ ಮರಳು ದಂಧೆ ನಡೆಸುತ್ತಿರುವವರ ವಿರುದ್ಧ ಯಾವ ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು ಉತ್ತರ ನೀಡಿದ್ದಾರೆ.

ಅನಧಿಕೃತ ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ನಿಯಂತ್ರಿಸಲು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ರಲ್ಲಿ ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮರಳು ಸಮಿತಿ ಹಾಗೂ ಉಪವಿಭಾಗಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮರಳು ಸಮಿತಿಯನ್ನು ರಚಿಸಲಾಗಿದೆ. ಅನಧಿಕೃತ ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಡೆಕಟ್ಟಲು ಖನಿಜ ಸಂರಕ್ಷಣಾ ಪಡೆ ಯನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ.

ಅಕ್ರಮ ಮರಳು ದಂಧೆಯಲ್ಲಿ ಶಾಮೀಲಾದ ವ್ಯಕ್ತಿಗಳ ವಿರುದ್ಧ ನಿಯಮಗಳನ್ವಯ ದಂಡ ವಸೂಲಿ ಮಾಡಲು ಹಾಗೂ ಸಂಬಂಧಪಟ್ಟ ಪೋಲಿಸ್ ಠಾಣೆ ಹಾಗೂ ಮಾನ್ಯ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News