×
Ad

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ

Update: 2025-03-11 20:51 IST

ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು ಮತ್ತು ನಾಳೆ ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ.

ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನ ಪಡೆದು, ಸೇವೆಯಲ್ಲಿ ಭಾಗಿಯಾಗಿದ್ದಾರೆ. ಕ್ಷೇತ್ರದ ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಇಂದು ಮತ್ತು ನಾಳೆ ಸರ್ಪ ಸಂಸ್ಕಾರ ಸೇವೆಯನ್ನು ನಟಿ ಕತ್ರಿನಾ ಕೈಫ್ ನೆರವೇರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News