×
Ad

ಸುಳ್ಯಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಅಭಿವೃದ್ಧಿಯ ಹೊಸ ಶಕೆ ಆರಂಭಕ್ಕೆ ನಾಂದಿ: ಭರತ್ ಮುಂಡೋಡಿ

Update: 2025-03-17 16:47 IST

ಸುಳ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕಗೊಂಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಮುಸ್ತಫ ಅವರು ಇಂದು ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ವಹಿಸಿ ಮಾತನಾಡಿ, ಸುಳ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭದ ಶುಭ ಸೂಚನೆಯಾಗಿದ್ದು, ಪ್ರತ್ಯೇಕ ಪ್ರಾಧಿಕಾರ ರಚನೆಯ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ ಎಂದರು.

ಸಮಾರಂಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್, ನಗರ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಎಂ. ವೆಂಕಪ್ಪ ಗೌಡ, ಎನ್.ಎ. ರಾಮಚಂದ್ರ, ಎಸ್. ಸಂಶುದ್ದೀನ್, ವಿನಯಕುಮಾರ್ ಕಂಡಡ್ಕ, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹಮೀದ್ ಕುತ್ತಾಮೊಟ್ಟೆ, ದ.ಕ. ಜಿಲ್ಲೆ ನಗರ ಮತ್ತು ಗ್ರಾಮಾoತರ ಯೋಜನಾ ಸಹಾಯಕ ನಿರ್ದೇಶಕ ಪ್ರವೀಣ್, ಟೌನ್ ಪ್ಲಾನರ್ ಮಹಮ್ಮದ್ ಫೈರೋಝ್, ರಾಜ್ಯ ಸಹಕಾರಿ ಮಹಾಮಂಡಲ ನಿರ್ದೇಶಕ ಚಂದ್ರಕೊಲ್ಚಾರ್, ನಗರ‌ ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಗೋಕುಲ್ ದಾಸ್, ಸರೋಜಿನಿ ಪೆಲ್ತಡ್ಕ, ದ.ಕ. ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಧಾ ಕೃಷ್ಣ ಬೊಳ್ಳೂರು ಮೊದಲಾದವರು ಉಪಸ್ಥಿತರಿದ್ದರು.

ಶಶಿಧರ್ ಮಾಸ್ಟರ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News