×
Ad

ನಾಡಿನ ಸಮಗ್ರತೆ ಹಾಗೂ ಪರಂಪರೆಯನ್ನು ರಕ್ಷಿಸುವ ಹೊಣೆ ಯುವಜನತೆಯ ಮೇಲಿದೆ: ಡಾ‌.ಎಂ.ವೆನಿಸ್ಸಾ

Update: 2025-03-22 20:23 IST

ಮಂಗಳೂರು: ನಾಡಿನ ಸಮಗ್ರತೆ ಹಾಗೂ ಪರಂಪರೆಯನ್ನು ರಕ್ಷಿಸುವ ಮಹತ್ವದ ಹೊಣೆಗಾರಿಕೆ ಯುವಜನತೆಯ ಮೇಲಿದೆ ಎಂದು ಸೈಂಟ್ ಆಗ್ನೆಸ್( ಸ್ವಾಯತ್ತ )ಕಾಲೇಜಿ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ ಎ.ಸಿ ತಿಳಿಸಿದ್ದಾರೆ.

ಅವರು ಶನಿವಾರ ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಸಂಘಟನ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿ.ವಿ. ಹಾಗೂ ಸೈಂಟ್ ಆಗ್ನೆಸ್ ಕಾಲೇಜು ವತಿಯಿಂದ ಎರಡು ದಿನಗಳ ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ ಶನಿವಾರ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ದೇಶದ ಮುಂದಿನ ರೂವಾರಿಗಳು. ನಾಡಿನ ಸಮಗ್ರತೆ ಹಾಗೂ ಪರಂಪರೆಯನ್ನು ರಕ್ಷಿ ಸುವ ಮಹತ್ವದ ಜವಾಬ್ದಾರಿ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಮಹತ್ವದ ಪಾತ್ರ ಇದೆ. ಬಡತನ ನಿರ್ಮೂಲನೆ, ಮಹಿಳಾ ಸಬಲೀಕರಣದ ಮೂಲಕ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವುದು ನಮ್ಮ ಗುರಿಯಾಗಬೇಕು ಎಂದರು.

ನೆಹರು ಯುವ ಕೇಂದ್ರದ ಉಪ ನಿರ್ದೇಶಕ. ಲೋಕೇಶ್ ಕುಮಾರ್ ಅವರು ಯೂತ್ ಪಾರ್ಲಿಮೆಂಟ್ ಭಾಷಣ ಸ್ಪರ್ಧೆಯ ವಿವಿಧ ಹಂತದ ವಿವರ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ರಾಜ್ಯ ಶಾಸ್ತ್ರ ಉಪನ್ಯಾಸಕ ಪ್ರೊ.ದಯಾನಂದ ನಾಯಕ್, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ.ಶೇಷಪ್ಪ ಅಮೀನ್.ಕೆ,ಸೈಂಟ್ ಆಗ್ನೆಸ್ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಉದಯಕುಮಾರ್.ಬಿ., ನೆಹರು ಯುವ ಕೇಂದ್ರದ ಆಡಳಿತ ಸಹಾಯಕ ಜಗದೀಶ್. ಕೆ. ಉಪಸ್ಥಿತರಿ ದ್ದರು . ವಿದ್ಯಾರ್ಥಿನಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

ಯೂತ್ ಪಾರ್ಲಿಮೆಂಟ್‌ನ ಸ್ಪರ್ಧೆಯ ತೀರ್ಪುಗಾರರಾಗಿ ಪ್ರೊ.ದಯಾನಂದ ನಾಯಕ್, ಹಿರಿಯ ಪತ್ರಕರ್ತ ರಾದ ಪಿ.ಬಿ.ಹರೀಶ್ ರೈ,ಪುಷ್ಪರಾಜ್.ಬಿ.ಎನ್, ವಕೀಲ ನಿಶಾನ್.ಎನ್. ಮತ್ತು ರೂಪ ಧರ್ಮಯ್ಯ ಭಾಗವಹಿಸಿದ್ದರು. ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಯ ನೂರಕ್ಕೂ ಅಧಿಕ ವಿದ್ಯಾರ್ಥಿ ಗಳು ಯೂತ್ ಪಾರ್ಲಿಮೆಂಟ್‌ನಲ್ಲಿ ಪಾಲ್ಗೊಂಡು ‘ ಏಕ ದೇಶ-ಏಕ ಚುನಾವಣೆ’ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News