×
Ad

ವೆನ್ಲಾಕ್ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಉಸ್ತುವಾರಿ ಸಚಿವರಿಗೆ ಮನವಿ

Update: 2025-04-07 19:00 IST

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ಗೆ ಸಜೀಪನಡು ಗ್ರಾಪಂ ಮಾಜಿ ಅಧ್ಯಕ್ಷ ನಾಸೀರ್ ಸಜೀಪ ಮನವಿ ಸಲ್ಲಿಸಿದ್ದಾರೆ.

ವೆನ್ಲಾಕ್ ಆಸ್ಪತ್ರೆಯ ಮಹಿಳಾ ವಾರ್ಡ್‌ನಲ್ಲಿರುವ ಶೌಚಾಲಯವನ್ನು ಪುರುಷರೂ ಬಳಸುತ್ತಾರೆ. ಇದರಿಂದ ಮಹಿಳೆಯರಿಗೆ ಮುಜುಗರ ಉಂಟಾಗುವ ಪರಿಸ್ಥಿತಿ ಇದೆ. ಹಾಗಾಗಿ ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು. ಮಹಿಳೆಯರ ವಾರ್ಡ್‌ನಲ್ಲಿ ಪರದೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಆಯುಷ್ಮಾನ್ ಕಾರ್ಡ್ ಬಳಕೆಯಾದ ಸಂದರ್ಭ ಅದರಲ್ಲಿ ಖರ್ಚು ಆದ ಮೊತ್ತದ ಬಗ್ಗೆ ಯಾವುದೇ ರೋಗಿಗೂ ಎಷ್ಟು ಹಣ ವೆಚ್ಚವಾಯಿತು ಎಂದು ಗೊತ್ತಾಗುವುದಿಲ್ಲ. ಹಾಗಾಗಿ ಈ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News