×
Ad

ಮಂಗಳೂರು : ಬಿಜೆಪಿ ಜನಾಕ್ರೋಶ ಯಾತ್ರೆ

Update: 2025-04-09 18:21 IST

ಮಂಗಳೂರು : ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಯು ಬುಧವಾರ ಮಂಗಳೂರಿನಲ್ಲಿ ನಡೆಯಿತು. ನಗರದ ಅಂಬೇಡ್ಕರ್ (ಜ್ಯೋತಿ) ವೃತ್ತ ದಿಂದ ಶುರುವಾಗಿ ಮಿನಿ ವಿಧಾನ ಸೌಧದ ಮುಂದೆ ಸಂಪನ್ನಗೊಂಡಿತು.

ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜೇಯೇಂದ್ರ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಪ್ರಮುಖರಾದ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸುನೀಲ್ ಕುಮಾರ್,ಶ್ರೀರಾಮಲು, ಮುನಿಸ್ವಾಮಿ,ರವಿಕುಕಾರ್, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮಂಜು,ಭಾಗೀರಥಿ, ರಾಜೇಶ್ ನಾಯಕ್, ಸಂಸದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ನಾಯಕರು, ಜಿಲ್ಲಾ ನಾಯಕರು ಭಾಗವಹಿಸಿದ್ದಾರೆ.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News