×
Ad

ದ.ಕ. ಜಿಲ್ಲಾಧಿಕಾರಿಗೆ ತರಕಾರಿ ನೀಡಿದ ಕುತ್ಲೂರು ಶಾಲಾ ವಿದ್ಯಾರ್ಥಿಗಳು

Update: 2025-04-16 19:53 IST

ಮಂಗಳೂರು, ಎ.16: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಮಾಡಿ ತಾವು ತಮ್ಮ ಶಾಲೆಯ ಆವರಣದಲ್ಲಿ ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು.

ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ .ಎ. ಎನ್, ಹಳೆ ವಿದ್ಯಾರ್ಥಿ ಸಂಘದ ಶಿವರಾಜ್, ದಕ್ಷಿಣ ಕನ್ನಡ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್‌ಇಂದಾಜೆ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‌ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News