ಎಲ್ಲರನ್ನು ಜತೆಯಾಗಿ ಕೊಂಡುಹೋಗುವ ಧ್ಯೇಯವೇ ಸಹಕಾರಿ ತತ್ವ: ಡಾ.ರಾಜೇಂದ್ರ ಕುಮಾರ್
ಸುಳ್ಯ: ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದ ವತಿಯಿಂದ ಮಂಗಳೂರಿನಲ್ಲಿ ಸೋಮವಾರ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಕುಮಾರ್ ಅವರು, ಸಹಕಾರ ಕ್ಷೇತ್ರದ ಧ್ಯೇಯ ಜಾತಿ, ಮತ, ಪಕ್ಷ ಭೇದವಿಲ್ಲದೆ ಎಲ್ಲರಲ್ಲೂ ಆರ್ಥಿಕ ಸಬಲೀಕರಣ, ನವೋದಯ ಟ್ರಸ್ಟ್ ಮೂಲಕ ಮಹಿಳಾ ಸಬಲೀಕರಣದ ಮೂಲಕ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿಸಿ ಬ್ಯಾಂಕ್ ಕೈ ಜೋಡಿಸಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ, ರಾಜ್ಯ ಅಪೆಕ್ಸ್ ಬ್ಯಾಂಕ್, ರಾಜ್ಯ ಸಹಕಾರ ಮಹಾಮಂಡಳ ಇದರ ಮಾಜಿ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಅವರು ಇತ್ತೀಚೆಗೆ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ, ಎಸ್ ಸಿ ಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡು, ಪ್ರತಿಷ್ಟಿತ ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪುರಸ್ಕಾರವನ್ನು ಪಡೆದು ಅವಳಿ ಡಾಕ್ಟರೇಟ್ ಪದವಿ ಪಡೆದ ವಿಶಿಷ್ಟ ಹೆಗ್ಗಳಿಕೆಗೆ ಪಾತ್ರರಾದ ಹಿನ್ನಲೆಯಲ್ಲಿ ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಐ.ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ತಿಳಿಸಿದರು.
ಈ ಸಂದರ್ಭ ಡಿಸಿಸಿ ಬ್ಯಾಂಕ್ ನಿರ್ದೇಶಕ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯಟ್ಟು, ಸಂಘದ ಉಪಾಧ್ಯಕ್ಷ ಕೆ.ಎಂ. ಮುಹಿಯುದ್ದೀನ್ ಫ್ಯಾನ್ಸಿ, ಸುಳ್ಯ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಸಂಘದ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್, ಕೆಪೆಕ್ ಮಾಜಿ ನಿರ್ದೇಶಕ ಪಿ.ಎ. ಮಹಮ್ಮದ್, ಉದ್ಯಮಿ ಕೆ. ಬಿ. ಇಬ್ರಾಹಿಂ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.