ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ಮುಂದೂಡಿಕೆ
Update: 2025-04-21 22:17 IST
ಮಂಗಳೂರು : ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯು ಎ.29ರಂದು ಕೂಳೂರು ಡೆಲ್ಟಾ ಮೈದಾನದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ.
ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮೇ 16ರ ಶುಕ್ರವಾರ ಪ್ರತಿಭಟನೆ ನಡೆಸಲು ನಿರ್ಧರಿಸಲಾಸಲಾಗಿದೆ ಎಂದು ಉಪಾಧ್ಯಕ್ಷ ಕೆ.ಅಶ್ರಫ್ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಲಹೆಗಾರರು ಪಾಲ್ಗೊಂಡಿದ್ದರು.