ಡಾ.ಅರುಣ್ ಕುಮಾರ್ ಶೆಟ್ಟಿಗೆ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ
Update: 2025-04-21 23:06 IST
ಮಂಗಳೂರು : ರಾಜ್ಯ ಸರಕಾರಿ ನೌಕರರಿಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯಾಗಿರುವ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಉಪ ನಿರ್ದೇಶಕರಾದ ಡಾ. ಅರುಣ್ ಕುಮಾರ್ ಶೆಟ್ಟಿ ಇಂದು ಪ್ರದಾನ ಮಾಡಲಾಯಿತು.
ಡಾ. ಅರುಣ್ ಕುಮಾರ್ ಅವರೊಂದಿಗೆ ಗದಗದ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ .ಜೆ.ಸಿ , ಬೆಂಗಳೂರು ಆಯುಷ್ ಇಲಾಖೆಯ ಅಸಿಸ್ಟೆಂಟ್ ಕಂಟ್ರೋಲರ್ ಡಾ.ಸಂಜಯ್ ಎಂ.ಎನ್. ಪ್ರಶಸ್ತಿ ಸ್ವೀಕರಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರಕಾರಿ ನೌಕರರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.