×
Ad

ವಿಟ್ಲ: ಎರಡು ಅಂಗಡಿಗಳು ಬೆಂಕಿಗಾಹುತಿ

Update: 2025-04-23 19:05 IST

ವಿಟ್ಲ: ಅರಮನೆ ರಸ್ತೆಯ ರಸ್ಕಿನ್ ಕಾಂಪ್ಲೆಕ್ಸ್ ನಲ್ಲಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲ ಮನೆಯ ರಸ್ತೆಯಲ್ಲಿರುವ ಕಟ್ಟಡದಲ್ಲಿರುವ ಇಕ್ಬಾಲ್ ಅವರ ಅಡಿಕೆ ಅಂಗಡಿ ಮತ್ತು ಶರೀಫ್ ಅವರ ತರಕಾರಿ ಅಂಗಡಿಯಲ್ಲಿ ತಡರಾತ್ರಿ ಎರಡು ಹೊಗೆ ಬರುವುದನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮುರುಳಿಧರ್ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ಕೂಡಲೇ ಪಿಕಪ್ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ಸ್ಥಳಕ್ಕೆ ಪುತ್ತೂರು ವಿಭಾಗದ ಅಗ್ನಿಶಾಮಕ ದಳದ ಸಿಬ್ಬಂದಿ  ಆಗ ಮಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದರು. ಆದರೆ ಅಂಗಡಿಯಲ್ಲಿದ್ದ ವಸ್ತುಗಳು ಭಾಗಃಶ ಸಂಪೂರ್ಣ ವಾಗಿ ಬೆಂಕಿಗಾಹುತಿಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News