ಕಾಶ್ಮೀರ ಭಯೋತ್ಪಾದನಾ ದಾಳಿ: ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲು ಸೂಚನೆ
Update: 2025-04-23 20:38 IST
ಮಂಗಳೂರು, ಎ.23: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯ ಗೊಂಡಿರುವುದಾಗಿ ವರದಿಯಾಗಿದೆ.
ದ.ಕ. ಜಿಲ್ಲೆಯಿಂದ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದಲ್ಲಿ ಅಂತಹವರ ಮಾಹಿತಿಯನ್ನು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ (ದೂ.ಸಂ: 0824 2442590 ಅಥವಾ 1077)ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿಯ ಕಚೇರಿ ಪ್ರಕಟನೆ ತಿಳಿಸಿದೆ.