ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಹವ್ಯಾಸಿ ಘಟಕಕ್ಕೆ ಆಯ್ಕೆ
ಮಂಗಳೂರು, ಎ.27: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್‌ನ ಹವ್ಯಾಸಿ ಘಟಕದ ಸಭೆಯು ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ಜೂ.1ರಂದು ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯುವ ಪಟ್ಲ ಸಂಭ್ರಮದ ದಶಮ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ ತೋನ್ಸೆ ಪುಷ್ಕಳ ಕುಮಾರ್, ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು, ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್, ಸಹ ಸಂಚಾಲಕರಾಗಿ ಚಂದ್ರಶೇಖರ ಕೊಂಕಣಾಜೆ ಮತ್ತು ಹರಿಶ್ಚಂದ್ರನಾಯ್ಕ ಮಾಡೂರು ಆಯ್ಕೆಯಾದರು.
ಗೌರವ ಸಲಹೆಗಾರರಾಗಿ ಡಾ.ಎಂ. ಪ್ರಭಾಕರ ಜೋಶಿ, ಜಬ್ಬಾರ್ ಸಮೋ ಸಂಪಾಜೆ, ಹರೀಶ್ ಬಳಂತಿಮೊಗರು, ಸುಬ್ರಹ್ಮಣ್ಯ ಬೈಪಡಿತ್ತಾಯ, ಪ್ರೊ.ಭಾಸ್ಕರ್ ರೈ ಕುಕ್ಕುವಳ್ಳಿ, ಸುಂದರ ಶೆಟ್ಟಿ ಬೆಟ್ಟಂಪಾಡಿ ಆಯ್ಕೆಯಾದರು.