×
Ad

ಮಂಗಳೂರು - ಸುಬ್ರಹ್ಮಣ್ಯ ರೈಲು ನಿಲ್ದಾಣಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಪ್ರಯಾಣಿಕರ ಆಗ್ರಹ

Update: 2025-04-28 20:08 IST

ಮಂಗಳೂರು: ಮಂಗಳೂರು - ಸುಬ್ರಹ್ಮಣ್ಯ ರೈಲು ನಿಲ್ದಾಣಗಳು ಎದುರಿಸುತ್ತಿರುವ ಮೂಲ ಸೌಕರ್ಯಗಳ ಕೊರತೆಯನ್ನು ನಿವಾರಿಸುವಂತೆ ರೈಲು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಮಂಗಳೂರು - ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಆದರೆ ನಾನಾ ನಿಲ್ದಾಣಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಪ್ರಯಾಣಕರು ದೂರಿದ್ದಾರೆ.

ಮಂಗಳೂರು - ಸುಬ್ರಹ್ಮಣ್ಯ ನಡುವಿನ ನಾನಾ ರೈಲು ನಿಲ್ದಾಣಗಳಲ್ಲಿ ರಾತ್ರಿ ಸಮಯದಲ್ಲಿ ಮತ್ತು ಅತೀ ಮುಂಜಾನೆ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣದಿಂದಾಗಿ ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ನಿಲ್ದಾಣದ ವಿಸ್ತರಣೆ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿ ಮೈಸೂರು ರೈಲ್ವೆ ವಿಭಾಗ ಹೆಚ್ಚಿನ ಆಸಕ್ತಿ ತೋರಿಸಿಲ್ಲ. ರೈಲು ನಿಲ್ದಾಣಗಳಲ್ಲಿ ನಳ್ಳಿಗಳನ್ನು ಹಾಕಿದರೂ ನೀರು ಸರಬರಾಜು ಇನ್ನೂ ಪ್ರಾರಂಭವಾಗಿಲ್ಲ ಎಂದು ಸ್ಥಳೀಯ ಪ್ರಯಾಣಿಕರು ದೂರಿದ್ದಾರೆ.

ಕಾಣಿಯೂರು ಸ್ಟೇಷನ್‌ನ ಟಿಕೆಟ್ ಕೊಡುವ ರೂಮಿನ ಕಿಟಕಿ ಬಾಗಿಲುಗಳು ಸರಿಯಾಗಿ ಮುಚ್ಚಲು ಸಾಧ್ಯ ವಿಲ್ಲದಂತಾಗಿವೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News