ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ: ದುಷ್ಕರ್ಮಿಗಳಿಂದ ತಲವಾರು ತೋರಿಸಿ ಬೆದರಿಕೆ
Update: 2025-05-02 20:34 IST
ಕಾವೂರು: ರೌಡಿ ಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಎರಡು ಕಡೆಗಳಲ್ಲಿ ದುಷ್ಕರ್ಮಿಗಳು ಸಾರ್ವಜನಿಕರಿಬ್ಬರಿಗೆ ತಲವಾರು ತೋರಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ವರದಿಯಾಗಿದೆ.
ಪಂಜಿಮೊಗರು ಸಮೀಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಂಜಿಮೊಗರು ನಿವಾಸಿ ಮೊಯ್ದಿನಬ್ಬ (37) ಮತ್ತು ಶಾಂತಿನಗರದ ನಾಸಿರ್ (38) ಎಂಬವರಿಗೆ ತಲವಾರು ತೋರಿಸಿ, ಬೆದರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿಕೊಂಡಿದ್ದ ಇಬ್ಬರು ದುಷ್ಕರ್ಮಿಗಳು ತಲವಾರಿನೊಂದಿಗೆ ಸಂಚರಿ ಸುತ್ತಾ ಬೆದರಿಸಿ ನಮ್ಮ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಸಂತ್ರಸ್ತರಿಬ್ಬರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಕಾವೂರು ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.